ಕರ್ನಾಟಕ ಲೋಕಸೇವಾ ಆಯೋಗ(KPSC)ದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರು ಉಳಿಕೆ ಮೂಲವೃಂದದ 1122 ಕಿರಿಯ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಳೆದ ವರ್ಷದ ಜನವರಿಯಲ್ಲಿ ಅಂತಿಮ ಆಯ್ಕೆಪಟ್ಟಿಯನ್ನು ಹೊರಡಿಸಿತ್ತು.
16 ಇಲಾಖೆಗಳಿಂದ ಪ್ರಸ್ತಾವನೆ ಸ್ವೀಕೃತವಾದ ಕಾರಣ ಮತ್ತೆ 79 ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ.
– ಉಳಿಕೆ ಮೂಲ ವೃಂದದ 59 ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳಿಗೆ ಅಂತಿಮ ಪಟ್ಟಿ ನೀಡಲಾಗಿತ್ತು. ಬಳಿಕ 2023ರ ಮಾರ್ಚ್ನಲ್ಲಿ ಹೆಚ್ಚುವರಿ ಪಟ್ಟಿಯನ್ನು ನೀಡಲಾಗಿತ್ತು.
ಒಟ್ಟು 34 ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು ಮರುಪ್ರಕಟಿಸಲಾಗಿದೆ ಎಂದು ಕೆಪಿಎಸ್ಸಿ ತಿಳಿಸಿದೆ.
– ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ವಿವಿಧ ಶಾಲೆಗಳಿಗಾಗಿ 239 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಸ್ವಇಚ್ಛಾ ಹೇಳಿಕೆಯನ್ನು ಆಧರಿಸಿ 106 ಅಭ್ಯರ್ಥಿಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ.
– ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿನ ವಸತಿ ಶಾಲೆಗಳಿಗೆ ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.
3 Comments
rZwbTuUdGkQNV
FHhYxcqZIMprn
OTlqJLKdbn