ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 14 ಮೇ 2020 ರಂದು ಅಧಿಸೂಚಿಸಿದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದ್ರಾಬಾದ್ ಕರ್ನಾಟಕ ವೃಂದದ-201 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 09-01-2023ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು, ಹಾಗೂ ದಿನಾಂಕ:05-05-2023ರಂದು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.