ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲ ಅಭಿಯಂತರರು ಮತ್ತು ರೇಷ್ಮೆ ಇಲಾಖೆಯಲ್ಲಿ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 17/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 31
* ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ : 25
* ರೇಷ್ಮೆ ಇಲಾಖೆ : 06
No. of posts: 31
Application Start Date: 17 ಸೆಪ್ಟೆಂಬರ್ 2022
Application End Date: 17 ಅಕ್ಟೋಬರ್ 2022
Last Date for Payment: 18 ಅಕ್ಟೋಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.