* ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಅಕ್ಟೋಬರ್ 29 ರಂದು ಬಿಡುಗಡೆ ಮಾಡಲಾಯಿತು.
* ಇಂದು ಹಾವೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಕನ್ನಡ ಸಾಹಿತ್ಯ ಸಮ್ಮೇಳದ ಲಾಂಛನ ಬಿಡುಗಡೆ ಮಾಡಿದರು.
* ಸಚಿವ ಸುನೀಲ್ ಕುಮಾರ್ ಅವರು, ಸಿಎಂ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಮೂರು ಲಕ್ಷ ಜನರು ಬರುವ ನಿರೀಕ್ಷೆಯಿದೆ. ನಗರದಲ್ಲಿ ಕನಿಷ್ಠ 25 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ‘ಕನಕ–ಷರೀಫ–ಸರ್ವಜ್ಞ’ ಹೆಸರಿನ ಪ್ರಧಾನ ವೇದಿಕೆ ಹಾಗೂ ‘ಪಾಪು–ಚಂಪಾ’ ಮತ್ತು ‘ಹೊಸಮನಿ ಸಿದ್ದಪ್ಪ–ಮಹದೇವ ಬಣಕಾರ’ ಹೆಸರಿನ ಎರಡು ಉಪ ವೇದಿಕೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
* ಲಾಂಛನದಲ್ಲಿ ರಾಣೆಬೆನ್ನೂರಿನ ಕೃಷ್ಣಮೃಗ, ಏಲಕ್ಕಿ ಹಾರ, ಬ್ಯಾಡಗಿ ಮೆಣಸಿನಕಾಯಿ, ಬಂಕಾಪುರದ ನವಿಲುಧಾಮ, ಭುವನೇಶ್ವರಿದೇವಿ, ಮಾಡಾಗ ಮಾಸೂರು ಕೆರೆ ಪ್ರಾಮುಖ್ಯತೆ ಬಿಂಬಿಸುವ ಲಾಂಛನ ರೂಪಿಸಲಾಗಿದೆ.
Subscribe to Updates
Get the latest creative news from FooBar about art, design and business.