ಮಂಡ್ಯ ಜಿಲ್ಲೆಯ ಕಂದಾಯ ಘಟಕದ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ದಿನಾಂಕ 12/03/2020ರ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಪೂರಕ ದಾಖಲೆಗಳೊಂದಿಗೆ ದಿನಾಂಕ21/01/2023 ಸಂಜೆ 05:30ರೊಳಗಾಗಿ ಅಂಚೆ ಮೂಲಕ ಆಯ್ಕೆ ಪ್ರಾಧಿಕಾರಿ ಹಾಗೂ ನೇಮಕಾತಿ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ, ಮಂಡ್ಯಜಿಲ್ಲೆ, ಮಂಡ್ಯ ಇವರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
mandya_VA