ಯುವಕರನ್ನು ಸಶಕ್ತಗೊಳಿಸುವ ಹಾಗೂ ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೋಮವಾರ ‘ಮೇರಿ ಲೈಫ್’ (ನನ್ನ ಬದುಕು) ಮೊಬೈಲ್ ಆ್ಯಪ್ ಅನಾವರಣಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ‘ಮಿಷನ್ ಲೈಫ್’ ಆ್ಯಪ್‌ನಿಂದ ಪ್ರೇರಣೆಗೊಂಡು ಇದನ್ನು ಅಭಿವೃದ್ಧಿಪಡಿಸಲಾಗಿದೆ.
ಮೇರಿ ಲೈಫ್‌ನಲ್ಲಿನ ‘ಲೈಫ್’ ಎಂಬ ಪದವು ಪರಿಸರಕ್ಕಾಗಿ ಜೀವನಶೈಲಿ ಎಂಬ ಅರ್ಥವನ್ನು ಕೊಡುತ್ತದೆ.
‘ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳುವುದಕ್ಕೆ ಈ ಆ್ಯಪ್ ನೆರವಾಗಲಿದೆ. ‘ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಇನ್‌ಸ್ಟಿಟ್ಯೂಟ್‌ಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಈ ಆ್ಯಪ್ ಪ್ರೋತ್ಸಾಹಿಸಲಿದೆ.