ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ.
ಬರುವ ಡಿಸೆಂಬರ್ 6 ರಿಂದ 22 ವರೆಗೆ ಪರೀಕ್ಷೆ ನಡೆಯಲಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ. ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ.
ಅಭ್ಯರ್ಥಿಗಳು ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು.
Application Start Date: 3 ಅಕ್ಟೋಬರ್ 2023
Application End Date: 28 ಅಕ್ಟೋಬರ್ 2023
Last Date for Payment: 29 ಅಕ್ಟೋಬರ್ 2023
Work Location: ಭಾರತದಾದ್ಯಂತ
Selection Procedure:ಈ ಅರ್ಹತಾ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿರುತ್ತದೆ. ಅಭ್ಯರ್ಥಿಗಳನ್ನು CBT ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:ನಿಗದಿತ ಸ್ನಾತಕೋತ್ತರ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದ SC/ST/OBC ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಸ್ನಾತಕೋತ್ತರ ಪದವಿಗೆ ಸೇರ್ಪಡೆಗೊಂಡರು ಅರ್ಜಿ ಸಲ್ಲಿಸಬಹುದು.
Fee:
UGC-NET ಪರೀಕ್ಷೆಗ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಸಾಮಾನ್ಯ ವರ್ಗದ ಅಭ್ಯರ್ಥಿಗಳು 1150ರೂ.
– ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ಮತ್ತು
– SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 325 ರೂ. ಶುಲ್ಕ ನಿಗದಿಪಡಿಸಲಾಗಿದೆ. ಆನ್ನ ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.
Age Limit:ಗರಿಷ್ಟ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online UGC- NET Exam 2023