ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ (CAR/DAR) ಮತ್ತು 1,137 (Non HK) ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil PC ) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು 2022-23 ರಲ್ಲಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು,
ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದಿನಾಂಕ 25/02/2024 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KSP ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು. ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ದಿನಾಂಕ08 ಜುಲೈ 2024 ರಿಂದ 12 ಜುಲೈ 2024 ವರೆಗೆ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಧಾರವಾಡ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿನ ಮೈದಾನಗಳಲ್ಲಿ ದೈಹಿಕ ಹಾಗೂ ಸಹಿಷ್ಟುತೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.