ಪಂಚಾಯತ್ ರಾಜ್ ಸಚಿವಾಲಯವು ನವದೆಹಲಿಯಲ್ಲಿ ಏಪ್ರಿಲ್ 17 ರಿಂದ ಏಪ್ರಿಲ್ 21ರ ವರೆಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಸಪ್ತಾಹವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಏಪ್ರಿಲ್ 24ರಂದು ನಿಗದಿಪಡಿಸಲಾದ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಪೂರ್ವಭಾವಿಯಾಗಿ ಆಜಾದಿ ಕಾ ಅಮೃತ್ ಮಹೋತ್ಸವ 2.0 ರ ಭಾಗವಾಗಿ ಪಂಚಾಯತ್ ರಾಜ್ ಸಚಿವಾಲಯವು ಇಂದಿನಿಂದ 21ರ ವರೆಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ವಾರವನ್ನು ಆಚರಿಸಲಿದೆ.