* ಎಲ್ಲಾ ಶಾಲೆಗಳ ಲೈಬ್ರರಿಯಲ್ಲಿ ಪ್ರಧಾನಿ ಮೋದಿ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕ ಲಭ್ಯವಿರಲು ಸೂಚನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬರೆದಿರುವ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕವನ್ನು ಶಾಲಾ ಗ್ರಂಥಾಲಯಗಳಲ್ಲಿ ಲಭ್ಯವಾಗುವಂತೆ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದೆ ಎಂದು ಅಧಿಕಾರಿಗಳು ಬುಧವಾರ ಫೆ. 22 ರಂದು ತಿಳಿಸಿದ್ದಾರೆ.
* ಶಿಕ್ಷಣ ಸಚಿವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ(ಯುಟಿ) ಆಡಳಿತಗಾರರಿಗೆ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕಗಳನ್ನು ‘ಸಮಗ್ರ ಶಿಕ್ಷಾ’ ಅಡಿಯಲ್ಲಿ ಪ್ರತಿ ಶಾಲೆಯ ಲೈಬ್ರರಿಗಳಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳಲು ತಿಳಿಸಿದ್ದಾರೆ, ಇದರಿಂದ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಪ್ರಧಾನಮಂತ್ರಿಯವರ ಬುದ್ಧಿವಂತಿಕೆ ಮತ್ತು ದೂರದೃಷ್ಟಿಯ ಮಾತುಗಳಿಂದ ಪ್ರಯೋಜನ ಪಡೆಯಬಹುದಾಗಿದೆ.
* ಮೋದಿಯವರ ಆಶಯದಂತೆ, ವಿದ್ಯಾರ್ಥಿಗಳು ಪರೀಕ್ಷೆಗಳ ಬಗ್ಗೆ ಭಯಪಡದೇ, ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಜೋಶಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಉತ್ತಮ ತಯಾರಿ ಹಾಗೂ ಆತ್ಮಸ್ಥೈರ್ಯದಿಂದ ಯಾವುದೇ ಪರೀಕ್ಷೆಯನ್ನು ಕೂಡ ಯಶಸ್ವಿಯಾಗಿ ಎದುರಿಸಬಹುದು.
Subscribe to Updates
Get the latest creative news from FooBar about art, design and business.
Previous ArticleRRR ಚಲನಚಿತ್ರಕ್ಕೆ ‘ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ’ ಪ್ರಶಸ್ತಿ