* ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.
* ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, ‘ಮೇಕ್ ಇನ್ ಇಂಡಿಯಾ’ ಮತ್ತು ದೇಶದ ಉತ್ಪಾದನಾ ವಲಯವನ್ನು ವಿಸ್ತರಿಸುವುದು ತುಂಬಾ ಅಗತ್ಯ ಎಂದು ಪ್ರಧಾನಿಯವರು ಹೇಳಿದರು.
* ಮೊದಲ ಬಾರಿಗೆ 30 ಲಕ್ಷಕ್ಕೂ ಹೆಚ್ಚು ಕರ್ನಾಟಕದ ಗ್ರಾಮೀಣ ಕುಟುಂಬಗಳಿಗೆ ಕೊಳಾಯಿ ನೀರು ತಲುಪಿದೆ”.
* ರಾಜ್ಯದಲ್ಲಿ ಕಳೆದ 8 ವರ್ಷಗಳಲ್ಲಿ 70 ಸಾವಿರ ಕೋಟಿ ರೂ. ಮೌಲ್ಯದ ಹೆದ್ದಾರಿ ಯೋಜನೆಗಳನ್ನು ಸೇರ್ಪಡೆ ಮಾಡಲಾಗಿದ್ದು, ಒಂದು ಲಕ್ಷ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ ಎಂದರು. ಕಳೆದ 8 ವರ್ಷಗಳಲ್ಲಿ ಕರ್ನಾಟಕದ ಯೋಜನೆಗಳ ರೈಲ್ವೆ ಬಜೆಟ್ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
* ದೇಶದಲ್ಲಿ ಬಡವರಿಗಾಗಿ 3 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಮತ್ತು ಕರ್ನಾಟಕದಲ್ಲಿ, ಬಡವರಿಗಾಗಿ 8 ಲಕ್ಷಕ್ಕೂ ಹೆಚ್ಚು ಪಕ್ಕಾ ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. “ಸಾವಿರಾರು ಮಧ್ಯಮ ವರ್ಗದ ಕುಟುಂಬಗಳಿಗೂ ತಮ್ಮ ಮನೆಗಳನ್ನು ನಿರ್ಮಿಸಿಕೊಳ್ಳಲು ಕೋಟ್ಯಂತರ ರೂಪಾಯಿಗಳ ನೆರವು ಒದಗಿಸಲಾಗಿದೆ.
* “ಕಳೆದ ವರ್ಷ, ಅನೇಕ ಜಾಗತಿಕ ಅಡೆತಡೆಗಳ ಹೊರತಾಗಿಯೂ, ಭಾರತದ ರಫ್ತು ಒಟ್ಟು 670 ಶತಕೋಟಿ ಡಾಲರ್ ಅಂದರೆ 50 ಲಕ್ಷ ಕೋಟಿ ರೂ. ಆಗಿತ್ತು. ಪ್ರತಿಯೊಂದು ಸವಾಲನ್ನು ಮೆಟ್ಟಿನಿಂತು ಭಾರತವು 418 ಶತಕೋಟಿ ಡಾಲರ್ ಅಂದರೆ 31 ಲಕ್ಷ ಕೋಟಿ ರೂಪಾಯಿಗಳ ಸರಕು ರಫ್ತು ಮಾಡಿ ಹೊಸ ದಾಖಲೆ ನಿರ್ಮಿಸಿದೆ”