ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಇದೀಗ 1:1 ಅನುಪಾತದ ಪರಿಷ್ಕೃತ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ವಿಭಾಗವಾರು ಬಿಡುಗಡೆ ಮಾಡಲಾಗಿದ್ದು,
ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರ್ಗಿ ವಿಭಾಗ ಮತ್ತು ಬೆಳಗಾವಿ ವಿಭಾಗದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 1/3/2023 ರಿಂದ 4/3/2023 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.