ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ 7 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು31/01/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ನ್ಯಾಯ ಆಡಳಿತಮಂಡಳಿ,
ಕಂದಾಯ ಭವನ, 7 ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು -560009
(Registrar, K.S.A.T., 7th Floor, Kandaya Bhavana, K.G.Road, Bengaluru-560009)
No. of posts: 7
Application Start Date: 14 ಜನವರಿ 2023
Application End Date: 31 ಜನವರಿ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ಪರೀಕ್ಷೆಯಲ್ಲಿ ಆಡಿದ ಒಟ್ಟು ಶೇಕಡಾ ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ(10th), ಪಿ.ಯು.ಸಿ.(12th) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ , ಕನ್ನಡ ಮತ್ತು ಆಂಗ್ಲಭಾಷಾ ಶೀಘ್ರಲಿಪಿ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 150 ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸತಕ್ಕದ್ದು.
SC/ ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,350 /- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.