ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಉದ್ಯೋಗ ವಿಭಾಗ) ಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.
– ಈ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಕನ್ನಡ ಭಾಷ್ಯಾ ಪರೀಕ್ಷೆಯನ್ನು 02/12/2023 ರಂದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು 03/12/2023 ರಂದು ನಡೆಸಲಾಗುತ್ತದೆ.
No. of posts: 1
Application Start Date: 8 ಸೆಪ್ಟೆಂಬರ್ 2023
Application End Date: 7 ಅಕ್ಟೋಬರ್ 2023
Work Location: ಕರ್ನಾಟಕ
Selection Procedure:ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ30,350- 58,250/-ವೇತನ ನೀಡಲಾಗುವದು