ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದ ಅಡಿಯಲ್ಲಿ ಬರುವ ಕಲಬುರಗಿ ಇ ಎಸ ಐ ಡೆಂಟಲ್ ಕಾಲೇಜಿನಲ್ಲಿ ಖಾಲಿ ಬೋಧಕರ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ02/11/2022 ರಂದು ನಡೆಯುವ ದಾಖಲೆ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದು, ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ದಿನಾಂಕ 03/11/2022 ರಂದು ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :
ESIC Dental College, Kalaburagi.
No. of posts: 21
Application Start Date: 19 ಅಕ್ಟೋಬರ್ 2022
Application End Date: 2 ನವೆಂಬರ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಡೆಂಟಲ್ ಸರ್ಜರಿಯಲ್ಲಿ ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 225/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,02,327/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.