ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 217 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 3 ವರ್ಷಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
No. of posts: 217
Application Start Date: 3 ಮೇ 2023
Application End Date: 19 ಮೇ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೃತ್ತಿ ಅನುಭವ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: MBA/ Diploma/ MCA/ MTech/ MSc/ BE/ BTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು, ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 63,840/- ರಿಂದ 78,230/- ರೂಗಳವರೆಗೆ ವೇತನ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.