ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಫಿಟ್ಟರ್ ಆರ್ಮಮೆಂಟ್, ಫಿಟ್ಟರ್ ಜನರಲ್ ಮೆಕ್ಯಾನಿಕ್, ಪೇಂಟರ್, ಚಾಲಕ ಕ್ರೇನ್ ಮೊಬೈಲ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-ಫೆಬ್ರವರಿ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
* ಹುದ್ದೆಗಳ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 248
Application Start Date: 31 ಜನವರಿ 2023
Application End Date: 27 ಫೆಬ್ರುವರಿ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ಶಾರ್ಟ್ ಲಿಸ್ಟ್ ಮಾಡಿ ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 205/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
OBC/ESM ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900-/ ರೂ ಗಳಿಂದ 63,200/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.