* ಕನ್ನಡಿಗ ರಾಬಿನ್ ಉತ್ತಪ್ಪ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
* ಉತ್ತಪ್ಪ 2006 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಇವರು ಡ್ರಾಪಿಂಗ್ ಬ್ಯಾಟರ್ ಎಂದೇ ಪ್ರಸಿದ್ದರಾಗಿದ್ದಾರೆ.
* ಇವರು ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿ, ನನ್ನ ಕುಟುಂಬದೊಂದಿಗೆ ಸಮಯ ಕಳೆಯುವದೇ ನನ್ ಜೀವನದಲ್ಲಿ ಹೊಸದೊಂದು ಅಧ್ಯಾಯ ಆರಂಭಿಸುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.
* ಕೊಡಗಿನ ಕುವರ ರಾಬಿನ್ ಉತ್ತಪ್ಪ ಅವರು ಬಲಗೈ ಬ್ಯಾಟರ್ ಮತ್ತು ವಿಕೆಟ್ ಕೀಪರ್ ಆಗಿದ್ದರು.
* ರಾಬಿನ್ ಉತ್ತಪ್ಪ ಅವರು 46 ಏಕದಿನ ಪಂದ್ಯಗಳನ್ನು, 13 ಟಿ20 ಗೇಮಗಳನ್ನು, 142 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು 203 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.
* ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಆದರೆ, ಪ್ರತಿಯೊಂದು ಒಳ್ಳೆಯ ವಿಷಯಕ್ಕೂ ಅಂತ್ಯವೆನ್ನುವುದು ಇದ್ದೆ ಇರುತ್ತದೆ.
* ಉತ್ತಪ್ಪ ಗುವಾಹಟಿಯಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು. ಉತ್ತಪ್ಪ ಭಾರತದ ಪರ ಒಟ್ಟು 46 ಏಕದಿನ ಪಂದ್ಯಗಳಲ್ಲಿ 934 ರನ್ ಗಳಿಸಿದ್ದರೆ, 13 ಟಿ20 ಪಂದ್ಯಗಳಲ್ಲಿ 249 ರನ್ ಗಳಿಸಿದ್ದಾರೆ