2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ30 ಜೂನ್ 2024ರ ಭಾನುವಾರದಂದು ಎರಡು ಅಧಿವೇಶನಗಳಲ್ಲಿ (ಪತ್ರಿಕೆ 1 ಮತ್ತು ಪತ್ರಿಕೆ 2) ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪರೀಕ್ಷಾ ಸ್ಥಳಗಳಲ್ಲಿ ಹಾಜರಿರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
– ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ ಹಾಗೂ ಪರೀಕ್ಷಾನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಅವರನ್ನು ಸಂಪರ್ಕಿಸಬಹುದು ಎಂದು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಜೂನ್ 20 ವಿಶ್ವ ನಿರಾಶ್ರಿತರ ದಿನ