ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರುದಲ್ಲಿ ಖಾಲಿ ಇರುವ ಸೈಟಿಸ್ಟ್, ಟೆಕ್ನಿಕಲ್ ಮತ್ತು ಸರ್ವಿಸ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ28/07/2022ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
THE REGISTRAR, UNIVERSITY OF AGRICULTURE SCIENCES,
LINGASUR ROAD, RAYACHURU-584104
No. of posts: 7
Application Start Date: 6 ಜುಲೈ 2022
Application End Date: 28 ಜುಲೈ 2022
Work Location: ರಾಯಚೂರ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ P.hd ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನಿಷ್ಠ 8 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಸೈoಟಿಸ್ಟ್ ಹುದ್ದೆಗಳಿಗೆ
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 2000/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 1000/- ಅರ್ಜಿ ಶುಲ್ಕ ಇರುತ್ತದೆ
ಟೆಕ್ನಿಕಲ್ ಮತ್ತು ಸರ್ವಿಸ್ ಹುದ್ದೆಗಳಿಗೆ
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕ ಇರುತ್ತದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 58,250/- ರಿಂದ 2,17,100/- ಮಾಸಿಕ ಗೌರವಧನವನ್ನು ನೀಡಲಾಗುತ್ತದೆ. ಜೊತೆಗೆ ಭತ್ತೆಯನ್ನು ನೀಡಲಾಗುವುದು.