* ಸುಪ್ರೀಂ ಕೋರ್ಟ್ ನ 49 ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
* ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಾದ ಉದಯ್ ಉಮೇಶ್ ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
* ನ್ಯಾಯಮೂರ್ತಿ ಎನ್ ವಿ ರಮಣ ಅವರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತಿ ಹೊಂದಿದ ಬೆನ್ನಲೇ ಉದಯ್ ಉಮೇಶ್ ಲಲಿತ್ ಅವರು ನೂತನ ನ್ಯಾಯಮೂರತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
* ನ್ಯಾಯಮೂರ್ತಿ ಲಲಿತ್ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯ ಪರಮೋಚ್ಛ ಕೇಂದ್ರ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರದಲ್ಲಿದ್ದು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.
* ನ್ಯಾಯಮೂರ್ತಿ ಲಲಿತ್ ಅವರು ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಜನಿಸಿದರು. ಅವರ ತಂದೆ ಯು ಆರ್ ಲಲಿತ್ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿದ್ದರು.
* ನ್ಯಾಯಮೂರ್ತಿ ಲಲಿತ್ ಅವರು ಬರುವ ನವೆಂಬರ್ 8 ರಂದು ನಿವೃತ್ತಿಯಾದ ನಂತರ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ.
Subscribe to Updates
Get the latest creative news from FooBar about art, design and business.
ಸುಪ್ರೀಂ ಕೋರ್ಟ್ ನ 49 ನೇ ಮುಖ್ಯ ನ್ಯಾಯಾಧೀಶರಾಗಿ ಉದಯ್ ಉಮೇಶ್ ಲಲಿತ್ ಪ್ರಮಾಣ ವಚನ ಸ್ವೀಕಾರ
Previous Articleಅಹಮದಾಬಾದ್‌ನಲ್ಲಿ ಐಕಾನಿಕ್ ‘ಅಟಲ್ ಸೇತುವೆ’ಯನ್ನು ಉದ್ಘಾಟಿಸಿದ ಪ್ರಧಾನಿ
Next Article ಕುಶಿಯಾರಾ ನದಿಯಲ್ಲಿ ಭಾರತ-ಬಾಂಗ್ಲಾದೇಶ ಒಪ್ಪಂದ