ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 26 ಜೂನಿಯರ್ ಅಸಿಸ್ಟಂಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 26
– ಮ್ಯಾನೇಜರ್ : 01
– ಜೂನಿಯರ್ ಅಸಿಸ್ಟಂಟ್ : 25
No. of posts: 26
Application Start Date: 22 ನವೆಂಬರ್ 2022
Application End Date: 8 ಡಿಸೆಂಬರ್ 2022
Work Location: ಉಡುಪಿ ಜಿಲ್ಲೆ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಹೊಂದಿರಬೇಕು. ಜೊತೆಗೆ ವೃತ್ತಿ ಅನುಭವ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.