ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ರ ಜಂಬೂಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆ ವತಿಯಿಂದ ಪ್ರದರ್ಶನಗೊಂಡ “ಧಾರವಾಡ ತಳಿ ಎಮ್ಮೆ, ನಮ್ಮ ಹೆಮ್ಮೆ”ಎಂಬ ಟ್ಯಾಗ್ಲೈನ್ ಹೊಂದಿದ್ದ ಧಾರವಾಡ ಜಿಲ್ಲಾ ಪಂಚಾಯಿತಿಯ ಸ್ತಬ್ಧಚಿತ್ರವು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಎಲ್ಲರಗಮನ ಸೆಳೆದಿದೆ.
ಈ ವರ್ಷ ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆಗಳಿಂದ ಸುಮಾರು 31 ಹಾಗೂ ಇತರ 18 ಇಲಾಖೆಗಳು ಸೇರಿ ಒಟ್ಟು 49 ಸ್ತಬ್ಧಚಿತ್ರಗಳು ಭಾಗವಹಿಸಿದ್ದವು.
ಅವುಗಳಲ್ಲಿ ಅತ್ಯುತ್ತಮ ಮೂರು ಸ್ತಬ್ಧಚಿತ್ರಗಳನ್ನು ತೀರ್ಪುಗಾರರು ಆಯ್ಕೆ ಮಾಡಿದ್ದು, ಈ ಪೈಕಿ ಆಕರ್ಷಕ ಮತ್ತು ಅರ್ಥಪೂರ್ಣವಾಗಿ ರೂಪುಗೊಂಡಿದ್ದ ಧಾರವಾಡ ಪೇಡಾ ಸ್ತಬ್ಧಚಿತ್ರ ವೀಕ್ಷಕರ ಗಮನ ಸೆಳೆದರೆ ‘ಧಾರವಾಡ ತಳಿ ಎಮ್ಮೆ, ನಮ್ಮ ಹೆಮ್ಮೆ’ ಸ್ತಬ್ಧಚಿತ್ರಕ್ಕೆ ನೀಡಿದ ಟ್ಯಾಗ್ಲೈನ್ ನೋಡುಗರ ಕಣ್ಮನ ಸಳೆಯುವ ಮೂಲಕ ಪ್ರಶಸ್ತಿಗೆ ಭಾಜನವಾಗಿದೆ.