ಜಗತ್ ಪ್ರಸಿದ್ಧ ಸರೋದ್ ವಾದಕ ಪದ್ಮಶ್ರೀ ಪುರಸ್ಕೃತ 91 ವರ್ಷ ವಯಸ್ಸಿನ ಪಂಡಿತ್ ರಾಜೀವ್ ತಾರಾನಾಥ್ ಅವರು ಜೂನ್ 11 ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಂಗಳೂರಿನಲ್ಲಿ 1932 ರ ಅಕ್ಟೋಬರ್ 17 ರಂದು ಜನಿಸಿದ ರಾಜೀವ್ ತಾರಾನಾಥ್ ಅವರು ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದರು.
ರಾಜೀವ್ ತಾರಾನಾಥ್ ಅವರ ಸರೋದ್ನ ಪಾಂಡಿತ್ಯವನ್ನು ಗುರುತಿಸಿ 2019 ರಲ್ಲಿ ಪದ್ಮಶ್ರೀ ಮತ್ತು 2000 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.
ರಾಜೀವ ತಾರನಾಥ ಅವರ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ(1998),
ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ (1993),
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1996),
ಕೆಂಪೇಗೌಡ ಪ್ರಶಸ್ತಿ (2006),
ಗಾಯನ ಸಮಾಜದಿಂದ ಸಂಗೀತ ಕಲಾರತ್ನ ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ,
ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿವಿಯಿಂದ ‘ನಾಡೋಜ’ ಪ್ರಶಸ್ತಿ, ಹಾಗೂ
ಭಾರತದ ಸರ್ಕಾರ ನೀಡುವ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದರು.